TOP AD

ಆಮಿರ್ ಖಾನ್, ಅಜಯ್ ದೇವಗನ್, ಅಕ್ಷಯ್ ಕುಮಾರ್ ಸಿನಿಮಾಗಳ ಹಿಂದಿಕ್ಕಿದ ‘ಕಾಂತಾರ 1’

Kantara Chapter 1 box office: ‘ಕಾಂತಾರ: ಚಾಪ್ಟರ್ 1’ ಸಿನಿಮಾ ತಮಿಳುನಾಡು, ಆಂಧ್ರ, ತೆಲಂಗಾಣಗಳಲ್ಲಿ 100 ಕೋಟಿಯ ಗಡಿಯತ್ತ ಸಿನಿಮಾ ದಾಪುಗಾಲು ಹಾಕಿದ್ದು ಆಯಾ ರಾಜ್ಯಗಳಲ್ಲಿ ಕೆಲ ಹೊಸ ದಾಖಲೆಗಳನ್ನು ಸಹ ಬರೆದಿದೆ. ಉತ್ತರ ಭಾರತದಲ್ಲಿ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುತ್ತಿದ್ದು, ಈಗಾಗಲೇ ಆಮಿರ್ ಖಾನ್, ಅಜಯ್ ದೇವಗನ್, ಅಕ್ಷಯ್ ಕುಮಾರ್ ಅವರ ಹಿಟ್ ಸಿನಿಮಾಗಳ ಗಳಿಕೆಯ ದಾಖಲೆಗಳನ್ನೇ ಮುರಿದು ಹಾಕಿದೆ.

ಸರ್ಕಾರಿ ಜಾಗದಲ್ಲಿ RSS ಚಟುವಟಿಕೆ ನಿಷೇಧ ಬಗ್ಗೆ ಮಹತ್ವದ ಸುಳಿವು ಕೊಟ್ಟ ಸಿಎಂ ಸಿದ್ದರಾಮಯ್ಯ

ಸರ್ಕಾರಿ ಜಾಗಗಳಲ್ಲಿ ರಾಷ್ಟ್ರೀಯ ಸ್ವಯಂಸೇವಾ ಸಂಘದ ಚಟುವಟಿಕೆ ನಿಷೇಧ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಸಚಿವ ಪ್ರಿಯಾಂಕ್ ಖರ್ಗೆ ಬರೆದ ಪತ್ರ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಜಟಾಪಟಿಗೆ ಕಾರಣವಾಗಿದೆ. ಈ ಬೆನ್ನಲ್ಲೇ ನಿಷೇಧ ಕುರಿತಾಗಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುಳಿವೊಂದನ್ನು ನೀಡಿದ್ದಾರೆ.

ಬೆಂಗಳೂರಿನಲ್ಲಿ ಕತ್ತು ಕೊಯ್ದು ವಿದ್ಯಾರ್ಥಿನಿಯ ಬರ್ಬರ ಹತ್ಯೆ, ಪರೀಕ್ಷೆ ಬರೆದು ಮನೆಗೆ ಹೋಗುತ್ತಿದ್ದವಳು ದುರಂತ ಅಂತ್ಯ

ಹಾಡಹಗಲೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಕೊಲೆ ನಡೆದಿದೆ. ಕಾಲೇಜು ಮುಗಿಸಿಕೊಂಡು ಮನೆಗೆ ವಾಪಸ್ ಆಗುತ್ತಿದ್ದ ವಿದ್ಯಾರ್ಥಿನಿಯನ್ನು ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಎಕ್ಸಾಮ್ ಬರೆದು ಮನೆ ಸೇರಬೇಕಿದ್ದ ವಿದ್ಯಾರ್ಥಿನಿ ಮಸಣ ಸೇರಿದ್ದಾಳೆ. ಇನ್ನು ಈ ಕೊಲೆಯಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಚಾಮರಾಜನಗರ: ಸಂಬಳ ನೀಡಿಲ್ಲವೆಂದು ಗಾಮ ಪಂಚಾಯಿತಿ ಕಚೇರಿ ಮುಂದೆಯೇ ವಾಟರ್​ಮ್ಯಾನ್ ನೇಣಿಗೆ ಶರಣು

ಚಾಮರಾಜನಗರ ತಾಲೂಕಿನ ಹೊಂಗನೂರು ಗ್ರಾಮದಲ್ಲಿ ಎರಡು ವರ್ಷಗಳಿಂದ ಸಂಬಳ ಸಿಗದೆ ಬೇಸತ್ತಿದ್ದ ವಾಟರ್​ಮ್ಯಾನ್ ಗ್ರಾ.ಪಂ. ಕಚೇರಿ ಬಾಗಿಲು ಬಳಿ ನೇಣಿಗೆ ಶರಣಾದ ಘಟನೆ ನಡೆದಿದೆ. ಹೊಂಗನೂರು ಗ್ರಾಮಸ್ಥರು ಗ್ರಾಮ ಪಂಚಾಯಿತಿಯ ಬಳಿ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಚಾಮರಾಜನಗರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾಸನಾಂಬೆ ಉತ್ಸವಕ್ಕೆ ನನ್ನ ತಾಯಿ ಕೈಹಿಡಿದು ಬರುತ್ತಿದ್ದಾಗಿನಿಂದ ನೋಡಿದ್ದೇನೆ: ಬಾಲ್ಯದ ನೆನಪು ಮೆಲುಕು ಹಾಕಿದ ಬಾನು ಮುಷ್ತಾಕ್

ಬೂಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಭಾನು ಮುಷ್ತಾಕ್​ ಅವರು ಇಂದು ಕುಟುಂಬ ಸಮೇತರಾಗಿ ಹಾಸನಾಂಬೆಯ ದರ್ಶನ ಪಡೆದುಕೊಂಡರು. ಬಳಿಕ ಮಾತನಾಡಿರುವ ಅವರು, ಇದು ನನಗೆ ಮೊದಲೇನಲ್ಲ, ನನ್ನ ತಾಯಿ ಕೈಹಿಡಿದು ಬರುತ್ತಿದ್ದಾಗಿನಿಂದ ನೋಡಿದ್ದೇನೆ ಎಂದು ತಮ್ಮ ಬಾಲ್ಯದ ದಿನಗಳನ್ನು ಮೆಲುಕು ಹಾಕಿದರು.

ಉಪ ರಾಷ್ಟ್ರಪತಿ ರಾಧಾಕೃಷ್ಣನ್​ ಚೆನ್ನೈ ನಿವಾಸಕ್ಕೆ ಹುಸಿ ಬಾಂಬ್​ ಬೆದರಿಕೆ

ನೆರೆ ರಾಜ್ಯ ತಮಿಳುನಾಡಿನಲ್ಲಿ ಹುಸಿ ಬಾಂಬ್​ ಬೆದರಿಕೆ ಪ್ರಕರಣಗಳು ಮೇಲಿಂದ ಮೇಲೆ ವರದಿಯಾಗುತ್ತಲೇ ಇವೆ. ನಟ, ಟಿವಿಕೆ ಅಧ್ಯಕ್ಷ ವಿಜಯ್​ ಮನೆ ಬಳಿಕ ಉಪ ರಾಷ್ಟ್ರಪತಿ ರಾಧಾಕೃಷ್ಣನ್​ ಅವರ ಚೆನ್ನೈ ನಿವಾಸಕ್ಕೆ ಹುಸಿಬಾಂಬ್​ ಬೆದರಿಕೆ ಹಾಕಲಾಗಿದೆ. ವಾರದ ಹಿಂದೆ ಇಂತಹುದೆ ಪ್ರಕರಣ ತಮಿಳುನಾಡಿನ ಮದುರವೋಯಲ್​ನಲ್ಲಿ ವರದಿಯಾಗಿತ್ತು. ಪಾರ್ಕ್​ ಮತ್ತು ದೇಗುಲದಲ್ಲಿ ಬಾಂಬ್​ ಇಟ್ಟಿರೋದಾಗಿ ಬೆದರಿಸಿದ್ದ ಆರೋಪಿಯನ್ನ ಪೊಲೀಸರು ಬಂಧಿಸಿದ್ದರು.

ಭಾರತ-ಅಫ್ಘಾನ್ ವಿರುದ್ಧ ಯುದ್ಧ ಮಾಡಲು ನಾವು ಸಿದ್ಧ: ಪಾಕ್​​ ರಕ್ಷಣಾ ಸಚಿವ

ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಭಾರತ ಮತ್ತು ಅಫ್ಘಾನಿಸ್ತಾನ ವಿರುದ್ಧ ಯುದ್ಧಕ್ಕೆ ಸಿದ್ಧ ಎಂದು ಎಚ್ಚರಿಸಿದ್ದಾರೆ. ಅಫ್ಘಾನ್ ವಿದೇಶಾಂಗ ಸಚಿವ ಭಾರತಕ್ಕೆ ಭೇಟಿ ನೀಡಿದ ನಂತರ ಪಾಕ್ ಈ ಹೇಳಿಕೆ ನೀಡಿದೆ. ತಾಲಿಬಾನ್‌ ಜೊತೆ ಪಾಕ್ ಗಡಿ ಸಂಘರ್ಷ ತೀವ್ರಗೊಂಡಿದ್ದು, ಪಾಕಿಸ್ತಾನದ ಮಿಲಿಟರಿಗೆ ಮುಜುಗರ ಉಂಟಾಗಿದೆ. ಈ ವೇಳೆ ಭಾರತದ ಪರ ತಾಲಿಬಾನ್ ಕಾರ್ಯನಿರ್ವಹಿಸುತ್ತಿದೆ ಎಂದು ಆಸಿಫ್ ಆರೋಪಿಸಿದ್ದಾರೆ.

Gold Rate Today Bangalore: ಚಿನ್ನದ ಬೆಲೆ 303 ರೂ ಹೆಚ್ಚಳ; ಬೆಳ್ಳಿ ಬೆಲೆ ಸತತ ಇಳಿಕೆ

Bullion Market 2025 October 17th: ಚಿನ್ನದ ಬೆಲೆ ಇಂದು ಶುಕ್ರವಾರ ಗ್ರಾಮ್​ಗೆ 300 ರೂ ಏರಿದರೆ, ಬೆಳ್ಳಿ ಬೆಲೆ 4 ರೂ ಕಡಿಮೆಗೊಂಡಿದೆ. ಆಭರಣ ಚಿನ್ನದ ಬೆಲೆ 11,865 ರೂನಿಂದ 12,170 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 13,277 ರೂಗೆ ಏರಿದೆ. ಬೆಳ್ಳಿ ಬೆಲೆ ಬೆಂಗಳೂರಿನಲ್ಲಿ 194 ರೂ ಆಗಿದೆ. ಮುಂಬೈ ಮೊದಲಾದೆಡೆ 185 ರೂಗೆ ಇಳಿದಿದೆ. ಚೆನ್ನೈ ಇತ್ಯಾದಿ ಕಡೆ 203 ರೂ ಆಗಿದೆ.

ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ಹಂದಿ ಜ್ವರ; ಈ ಲಕ್ಷಣಗಳನ್ನು ನಿರ್ಲಕ್ಷ್ಯಿಸಬೇಡಿ!

ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಹಂದಿ ಜ್ವರ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಅನೇಕ ಜನರು ಜ್ವರದ ರೋಗಲಕ್ಷಣಗಳು ಕಾಣಿಸಿಕೊಂಡಾಗ ಮನೆಮದ್ದುಗಳ ಮೊರೆ ಹೋಗುತ್ತಾರೆ ಆದರೆ, ವೈದ್ಯರನ್ನು ಸಂಪರ್ಕಿಸುವುದು ಉತ್ತಮ. ಏಕೆಂದರೆ ಸಮಸ್ಯೆಯು ಗಂಭೀರವಾಗಬಹುದು, ಕೆಲವರಲ್ಲಿ ರೋಗಲಕ್ಷಣಗಳು ಕಾಲಕ್ರಮೇಣ ಕಡಿಮೆಯಾಗಬಹುದು. ಹಂದಿಜ್ವರದ ಲಕ್ಷಣಗಳು ಯಾವುವು? ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

India vs Australia: ಸ್ಟಾರ್ ಬ್ಯಾಟರ್ ಔಟ್: ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ XI

India's probable playing XI vs Australia 1st ODI: ಟೀಮ್ ಇಂಡಿಯಾದ ಆಸ್ಟ್ರೇಲಿಯಾ ಪ್ರವಾಸದ ವಿಶೇಷವೆಂದರೆ ಶುಭ್ಮನ್ ಗಿಲ್ ಮೊದಲ ಬಾರಿಗೆ ನಾಯಕತ್ವ ವಹಿಸಿಕೊಳ್ಳಲಿದ್ದಾರೆ. ಅಲ್ಲದೆ, ಬಹಳ ಸಮಯದ ನಂತರ, ರೋಹಿತ್ ಶರ್ಮಾ ಒಬ್ಬ ಆಟಗಾರನಾಗಿ ಕಣಕ್ಕಿಳಿಯಲಿದ್ದಾರೆ. ಪರ್ತ್ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಮತ್ತು ಪ್ರಸ್ತುತ ನಾಯಕ ಗಿಲ್ ಇನ್ನಿಂಗ್ಸ್ ಅನ್ನು ತೆರೆಯಲಿದ್ದಾರೆ.

ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆಯುವಂತಿದೆ ಕೇರಳದ ಸುಸಜ್ಜಿತ ಹವಾನಿಯಂತ್ರಿತ ಈ ಸರ್ಕಾರಿ ಶಾಲೆ

ಸರ್ಕಾರಿ ಶಾಲೆಗಳು ಯಾವುದೇ ಖಾಸಗಿ ಶಾಲೆಗಳಿಗಿಂತ ಕಡಿಮೆಯಿಲ್ಲ. ಇದಕ್ಕೆ ಉದಾಹರಣೆಯಂತೆ ಕೇರಳದ ಈ ಶಾಲೆ. ಇದು ಸಂರ್ಪೂಣ ಹವಾನಿಯಂತ್ರಿತವಾಗಿದೆ. ಕೇರಳದ ಮುತ್ತಿಪ್ಪಾಡಿಯಲ್ಲಿ ಆಧುನಿಕ ಹೈಟೆಕ್ ಶಾಲೆಯೂ ನಿರ್ಮಾಣಗೊಂಡಿದ್ದು, ಅಕ್ಟೋಬರ್ 19 ರಂದು ಉದ್ಘಾಟನೆ ನಡೆಯಲಿದೆ. ಈ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

Deepavali 2025: ನಕಾರಾತ್ಮಕ ಶಕ್ತಿ ಹೊರಹಾಕಲು ದೀಪಾವಳಿಯಂದು ಮನೆಯ ಈ ಭಾಗಗಳಲ್ಲಿ ದೀಪ ಬೆಳಗಿಸಿ!

ಈ ದೀಪಾವಳಿಯಂದು ಮನೆಯ ಯಾವ ಭಾಗದಲ್ಲಿ ದೀಪಗಳನ್ನು ಹಚ್ಚಬೇಕು ಎಂಬುದನ್ನು ಇಲ್ಲಿ ವಿವರಿಸಲಾಗಿದೆ. ದೀಪಾವಳಿಯಂದು ದೀಪ ಬೆಳಗಿಸುವುದು ಲಕ್ಷ್ಮಿ ಪೂಜೆಯ ಜೊತೆಗೆ ಮನೆಯಿಂದ ನಕಾರಾತ್ಮಕ ಶಕ್ತಿಯನ್ನು ಹೊರಹಾಕಿ ಸಕಾರಾತ್ಮಕತೆಯನ್ನು ಆಕರ್ಷಿಸುತ್ತದೆ. ಅಂಗಳ, ಮುಖ್ಯ ದ್ವಾರ, ಅಡುಗೆಮನೆ ಮತ್ತು ತುಳಸಿ ಕಟ್ಟೆಯಂತಹ ಶುಭ ಸ್ಥಳಗಳಲ್ಲಿ ದೀಪಗಳನ್ನು ಬೆಳಗಿಸುವ ಮೂಲಕ ಸಂಪತ್ತು, ಸಮೃದ್ಧಿ, ಸಂತೋಷ ಮತ್ತು ಅನ್ನಪೂರ್ಣೇಶ್ವರಿಯ ಆಶೀರ್ವಾದ ಪಡೆಯಿರಿ.

ಆನೆಕಲ್​ನಲ್ಲಿ ನಿರ್ಮಾಣವಾಗಲಿದೆ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ; ಸಚಿವ ಸಂಪುಟದ ಮಹತ್ವದ ನಿರ್ಧಾರ

ಆನೇಕಲ್ ತಾಲ್ಲೂಕಿನಲ್ಲಿ ₹2,350 ಕೋಟಿ ವೆಚ್ಚದಲ್ಲಿ 80,000 ಆಸನ ಸಾಮರ್ಥ್ಯದ ಅಂತರರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣಕ್ಕೆ ಸಚಿವ ಸಂಪುಟ ತಾತ್ವಿಕ ಅನುಮೋದನೆ ನೀಡಿದೆ. ಆರ್​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತದ ನಂತರ ಬೆಂಗಳೂರಿನ ಚಿನ್ನಸ್ವಾಮಿ ಅಂತರಾಷ್ಟ್ರೀಯ ಕ್ರೀಡಾಂಗಣದ ಸಾಮರ್ಥ್ಯದ ಬಗ್ಗೆ ಪ್ರಶ್ನೆಗಳು ಮೂಡಿದ್ದವು. ಈಗ ಆನೆಕಲ್​ನಲ್ಲಿ ವಿಶ್ವದರ್ಜೆಯ ಸೌಲಭ್ಯಗಳೊಂದಿಗೆ ರಾಜ್ಯದ ಮೂರನೇ ಅಂತಾರಾಷ್ಟ್ರೀಯ ಕ್ರೀಡಾಂಗಣವಾಗಲಿದೆ.

Weather Forecast: ರಾಜ್ಯದ 25 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್, ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಸೂಚನೆ

Karnataka Weather Tomorrow: ರಾಜ್ಯದಲ್ಲಿ ಭಾರಿ ಮಳೆಯಾಗಲಿದ್ದು, 25 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ಕರಾವಳಿ ಭಾಗದಲ್ಲಿ ಗಾಳಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನಲೆ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದ್ದು, ಬೆಂಗಳೂರಲ್ಲೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ರಾಜಕೀಯಕ್ಕೆ ಎಂಟ್ರಿ ಆಗ್ಬೇಕಾ? ಅದಕ್ಕೂ ಬರಲಿದೆ ಕೋರ್ಸ್! ಬೆಂಗಳೂರಿನಲ್ಲಿ ಮುಂದಿನ ವರ್ಷ ಶುರುವಾಗತ್ತೆ ರಾಜಕೀಯ ಪದವಿ ಕಾಲೇಜು

ರಾಜಕೀಯ ಅಧ್ಯಯನ ಆಸಕ್ತ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ. ಬೆಂಗಳೂರಿನಲ್ಲಿ 2026ರ ಜೂನ್‌ನಲ್ಲಿ ರಾಜಕೀಯ ಪದವಿ ಕಾಲೇಜು ಆರಂಭಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ. ಇದು ಮೂರು ವರ್ಷಗಳ ಕೋರ್ಸ್ ಆಗಿದ್ದು, ರಾಜಕೀಯ ನೀತಿ ಸಂಹಿತೆ ಮತ್ತು ಸಿದ್ಧಾಂತ ವಿಷಯಗಳನ್ನು ಒಳಗೊಂಡಿರುತ್ತದೆ. ಪಠ್ಯಕ್ರಮ ರೂಪಿಸಲು ನಿವೃತ್ತ ಪ್ರಾಧ್ಯಾಪಕರು ಹಾಗೂ ಹಿರಿಯ ರಾಜಕಾರಣಿಗಳ ಸಲಹೆ ಪಡೆಯಲಾಗುವುದು ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.

AD 5